ಜನಮನ

ಕುಂದಾಪುರ ಉಪವಿಭಾಗಾಧಿಕಾರಿ ಕೆ.ಮಹೇಶ್ ಚಂದ್ರ ಕರ್ತವ್ಯಲೋಪದಿಂದ  ಅಮಾನತು 

Views: 364

ಕನ್ನಡ ಕರಾವಳಿ ಸುದ್ದಿ:ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಕೆ.ಎ.ಎಸ್. ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಅಮಾನತುಗೊಳಿಸಲಾಗಿದೆ.

ಮಹೇಶ್ ಅವರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ವೇಳೆ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ವಿವಿಧ ದಾಖಲೆಗಳನ್ನು, ನಿಯಮ ಮೀರಿ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹೇಶ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರೂ ಸೂಕ್ತ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.

ಮಹೇಶ್‌ ಚಂದ್ರ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಮುಂದಿನ ಆದೇಶದ ತನಕ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರನ್ನು ಪ್ರಭಾರ ಉಪವಿಭಾಗಾಧಿಕಾರಿಯಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ.

Related Articles

Back to top button