ಕುಂದಾಪುರ ಎಜುಕೇಶನ್ ಸೊಸೈಟಿ “ಸುವರ್ಣ ಸೌಧ” ಉದ್ಘಾಟನೆ
Views: 0
ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ನಗರದಲ್ಲಿ 50 ವರ್ಷಗಳಿಂದ ಸಹಸ್ರ ಸಹಸ್ರ ಮಕ್ಕಳಿಗೆ ವಿದ್ಯಾರ್ಜನ ನೀಡಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಅರ್ಪಿಸಿದ ಕುಂದಾಪುರ ಎಜುಕೇಶನ್ ಸೊಸೈಟಿ ಮಾದರಿ ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನದಲ್ಲಿ ನುಡಿದರು.
ಅವರು ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಸಂಭ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನಿರ್ಮಾಣಗೊಂಡ ಸುವರ್ಣ ಸೌಧ ಉದ್ಘಾಟಿಸಿ, ಸ್ವಾಮೀಜಿ ಆಶೀರ್ವಚನ ನೀಡಿದರು.
50 ವರ್ಷಗಳ ಕಾಲ ಸತತವಾಗಿ ಉತ್ತಮ ಸೇವೆ ನೀಡುವುದು ಸಾಮಾನ್ಯದ ಸಾಧನೆಯಲ್ಲ ಒಂದು ಮನೆ, ಸಮಾಜ, ದೇಶ, ವಿಶ್ವವನ್ನೇ ಬದಲಾಯಿಸುವ ಶಕ್ತಿ ವಿದ್ಯಾ ಸಂಸ್ಥೆಗೆ ಇದೆ. 50ನೇ ವರ್ಷಾಚರಣೆಯ ಉತ್ಸವವಾಗಿ ಆಚರಿಸುತ್ತಿರುವುದು ನಿಜವಾಗಿ ಅರ್ಥಪೂರ್ಣವಾದದ್ದು, ಇದೊಂದು ಜ್ಞಾನ ದೇಗುಲವಾಗಿ ಮಾರ್ಪಟ್ಟಿದೆ ಎಂದು ಸ್ವಾಮೀಜಿ ನುಡಿದರು.
ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಬಡ ಮಕ್ಕಳ ಶಿಕ್ಷಣಕ್ಕಾಗಿ ಸೃಷ್ಟಿಸಿದ ಈ ಆಸ್ತಿ ಇಂದು ಸಹಸ್ರಾರು ಮಕ್ಕಳ ವಿದ್ಯಾರ್ಜನೆಗೆ ಕಾರಣವಾಗಿದ್ದರೆ ಅದು ರಾಯರ ಅನುಗ್ರಹ ಕಾರಣ ಎಂದರು.
ವೇದಿಕೆಯಲ್ಲಿ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಬಾಂಡ್ಯ ಸುಧಾಕರ ಶೆಟ್ಟಿ, ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಉಮೇಶ್ ಶೆಟ್ಟಿ ಆರ್.ಎನ್.ಶೆಟ್ಟಿ ಪಿಯು ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಎಚ್.ಎಂಎಂ ಮತ್ತು ವಿಕೆಆರ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲೆ ಡಾ.ಚಿಂತನಾ ರಾಜೇಶ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ರೇಷ್ಮಾ ಶೆಟ್ಟಿ ನಿರೂಪಿಸಿದರು.






