ಇತರೆ

ಕುಂದಾಪುರ ಎಜುಕೇಶನ್ ಸೊಸೈಟಿ “ಸುವರ್ಣ ಸಂಭ್ರಮ” ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ 

ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಭಾರತ ವಿಶ್ವಮಾನ್ಯವಾಗಿದೆ ಐವತ್ತು ವರ್ಷಗಳ ಯಾತ್ರೆಯಲ್ಲಿ ಸಂಸ್ಥೆಯ ಪ್ರಗತಿ, ಸಮಾಜಕ್ಕೆ ಅರ್ಪಣೆ, ರಾಷ್ಟ್ರನಿರ್ಮಾಣಕ್ಕೆ ಉತ್ತಮ ಕೊಡುಗೆ------ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

Views: 3

ಕನ್ನಡ ಕರಾವಳಿ ಸುದ್ದಿ: ಯುವ ಭಾರತ ಪ್ರಗತಿ ಪಥದತ್ತ ಸಾಗಲು ಗ್ರಾಮಾಂತರ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಂದಾಪುರ ಎಜುಕೇಶನ್ ಸೊಸೈಟಿ ಸಹಿತ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದುಡಿಯುತ್ತಿರುವ ಶಿಕ್ಷಣ ಸಂಸ್ಥೆಗಳ ಸೇವೆ ಅಭಿನಂದನೀಯ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್  ಹೇಳಿದರು.

ಅವರು ಮಂಗಳವಾರ ಇಲ್ಲಿನ ಡಾ। ಬಿ.ಬಿ.ಹೆಗ್ಡೆ ಕಾಲೇಜಿನ ಬಿಎಂಎಸ್ ಕ್ರೀಡಾಂಗಣದಲ್ಲಿ ಕುಂದಾಪುರ ಎಜುಕೇಶನ್‌ ಸೊಸೈಟಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಸ್ಕೃತಿ ಹಾಗೂ ಪರಂಪರೆ ಯಲ್ಲಿ ಭಾರತ ವಿಶ್ವಮಾನ್ಯವಾಗಿದೆ , ಐವತ್ತು ವರ್ಷಗಳ ಯಾತ್ರೆಯಲ್ಲಿ ಸಂಸ್ಥೆಯ ಪ್ರಗತಿ, ಸಮಾಜಕ್ಕೆ ಅರ್ಪಣೆ, ರಾಷ್ಟ್ರನಿರ್ಮಾಣಕ್ಕೆ ಉತ್ತಮ ಕೊಡುಗೆಯಾಗಿದ್ದು ಮುಂದಿನ ವರ್ಷಗಳಲ್ಲಿ ಶಿಕ್ಷಣ ಸಂಸ್ಥೆ ಇನ್ನಷ್ಟು ಶಕ್ತಿಶಾಲಿಯಾಗಲಿ ಬೆಳಗಲಿ ಎಂದರು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದ 48 ಸಾವಿರ ಶಾಲೆಗಳಲ್ಲಿ  7 ಸಾವಿರ ಶಾಲೆಗಳು ಮುಚ್ಚುತ್ತಿರುವ ಸ್ಥಿತಿಯಲ್ಲಿರುವಾಗ ಈ ಶಿಕ್ಷಣ ಸಂಸ್ಥೆ ಪ್ರಗತಿ ಪಥದಲ್ಲಿ ಸಾಗುತ್ತಿರುವುದು ಐತಿಹಾಸಿಕ ದಾಖಲೆಯಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಸಂವಿಧಾನಾತ್ಮಕವಾಗಿ ಎಲ್ಲರಿಗೂ ದೊರೆಯಬೇಕು. ಶಿಕ್ಷಣ ಕ್ಷೇತ್ರಗಳಲ್ಲಿ ಖಾಸಗಿಯವರ ಕೊಡುಗೆ ದೊಡ್ಡದಿದೆ. ಕುಂದಾಪುರ ಎಜುಕೇಶನ್ ಸೊಸೈಟಿಯವರ ವಿಶಿಷ್ಟ ಸಾಧನೆಯಿಂದ ನಾಡಿಗೆ ಕೀರ್ತಿ ತರುವಂತಹ ಕೆಲಸ ಮಾಡಿದ್ದಾರೆ ಎಂದರು.

ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಸಮಾಜದ ಕಟ್ಟ ಕಡೆಯ ಮಗು ವಿದ್ಯಾವಂತನಾದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂಬ ಧ್ಯೇಯದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿರುವ ನನಗೆ ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದಕ್ಕೆ ಸಂತೃಪ್ತಿ ಇದೆ ಎಂದರು.

ಆಧ್ಯಾತ್ಮ ಚಿಂತಕ ಡಾ| ಬಾಲಕೃಷ್ಣ ಗುರೂಜಿ ತಿರುಪತಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅರ್ಚಕ ಮೂರ್ತಿ ಕಾಳಿದಾಸ್ ಭಟ್, ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಆರ್. ಎನ್. ಶೆಟ್ಟಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಎಚ್‌ಎಂಎಂ ಹಾಗೂ ವಿಕೆಆರ್‌ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್‌ ಇದ್ದರು.

ಡಾ। ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ। ಉಮೇಶ್ ಶೆಟ್ಟಿ ಕೊತ್ತಾಡಿ ಕುಂದಾಪುರ ಎಜುಕೇಶನ್ ಸೊಸೈಟಿಯ ಪ್ರಗತಿ ವರದಿ ವಾಚಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿದರು.ರಕ್ಷಿತ್ ಪರಿಚಯಿಸಿದರು. ಉಪನ್ಯಾಸಕಿ ಪೃಥ್ವಿಶ್ರೀ ಶೆಟ್ಟಿ ನಿರೂಪಿಸಿದರು. ಉಪನ್ಯಾಸಕ ಗಿರಿರಾಜ್ ಭಟ್ ವಂದಿಸಿದರು.

 

Related Articles

Back to top button
error: Content is protected !!