ಕುಂದಾಪುರ: ಕೆದೂರಿನಲ್ಲಿ ರೈಲು ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Views: 124
ಕುಂದಾಪುರ: ತಾಲೂಕಿನ ಕೆದೂರು ರೈಲ್ವೆ ಬ್ರಿಡ್ಜ್ ಬಳಿ ವ್ಯಕ್ತಿಯೊಬ್ಬರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಜ.20 ರಂದು ಶನಿವಾರ ಸಂಜೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಲ್ಯಾಡಿ ನಿವಾಸಿ ಕುಷ್ಟ ದೇವಾಡಿಗ (78) ಎಂದು ಗುರುತಿಸಲಾಗಿದೆ.
ಇವರು ಮೂಲತ ಹಳ್ನಾಡಿನವರು. ಮಲ್ಯಾಡಿಯಲ್ಲಿ ವಾಸವಾಗಿದ್ದರು. ಇವರಿಗೆ 4 ವರ್ಷದ ಹಿಂದೆ ಮೆದುಳು ಜ್ವರದಿಂದ ಅಸ್ವಸ್ಥರಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. .
ಇಂದು ಸಂಜೆ ಮನೆಯಿಂದ ಹೊರಗೆ ಹೋದವರು ಸುಮಾರು 5 ಗಂಟೆಗೆ ಕೆದೂರು ರೈಲ್ವೆ ಬ್ರಿಡ್ಜ್ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದ ತಕ್ಷಣ ಕೋಟ ಪೊಲೀಸ್ ಠಾಣಾಧಿಕಾರಿ ತೇಜಸ್ವಿ, ಎಎಸ್ಐ ರವಿ ಕುಮಾರ್, ಹೆಡ್ ಕಾನ್ಸ್ಟೇಬಲ್ ಗಣೇಶ್ ಹಾಗೂ ರಾಘವೇಂದ್ರ ಶೆಟ್ಟಿ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಹಾಗೂ ಸ್ಥಳೀಯರು ಗುರುತಿಸಲಾಗದ ಛಿದ್ರಗೊಂಡಿದ್ದ ಮೃತ ದೇಹವನ್ನು ಎತ್ತಿ ಗೋಣಿ ಚೀಲಕ್ಕೆ ತುಂಬಿ ಆಸ್ಪತ್ರೆಗೆ ಸಾಗಿಸಿರುತ್ತಾರೆ.






