ಕುಂದಾಪುರ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಸಾವು

Views: 1
ಕುಂದಾಪುರ: ಕಾರಿನಲ್ಲಿ ಬಂದು ಅಪರಿಚಿತನೊಬ್ಬ ಚೂರಿ ಇರಿದು ಪರಾರಿಯಾದ ಘಟನೆ ರವಿವಾರ ಸಂಜೆ ಕುಂದಾಪುರದ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ನಡೆದಿದೆ.
ಕುಂದಾಪುರ ಮೂಲದ ರಾಘವೇಂದ್ರ (42) ಚೂರಿ ಇರಿತಕ್ಕೊಳಗಾದವರು. ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಘವೇಂದ್ರ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ರಾಘವೇಂದ್ರ ಅವರ ಕಾರನ್ನು ಅಡ್ಡಗಟ್ಟಿ, ತೊಡೆಗೆ ಚೂರಿ ಇರಿದು, ಕಾರಿನಲ್ಲಿ ಪರಾರಿಯಾಗಿದ್ದಾನೆ.
ಚೂರಿ ಇರಿತಕ್ಕೊಳಗಾದ ವ್ಯಕ್ತಿ ರಾಘವೇಂದ್ರ ಇಂದು ಮುಂಜಾನೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತರು ಈ ಹಿಂದೆ ಬೆಂಗಳೂರಿನಲ್ಲಿ ಹೋಟೆಲ್ ನಡೆಸಿಕೊಂಡಿದ್ದರು.ಆದರೆ ಅವರು ಇತ್ತೀಚೆಗೆ ಊರಿನಲ್ಲಿಯೇ ಇದ್ದಿದ್ದರು.ಅವರಿಗೆ ಪತ್ನಿ, ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬ ಬಗ್ಗೆ ಮಾಹಿತಿ ತನಿಖೆಯಿಂದಷ್ಟೆ ತಿಳಿದುಬರಬೇಕಿದೆ.
ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ವೃತ್ತ ನಿರೀಕ್ಷಕ ನಂದ ಕುಮಾರ್, ಕುಂದಾಪುರ ನಗರ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿ, ತನಿಖೆ ಮುಂದುವರಿದಿದೆ.






