ಶಿಕ್ಷಣ

ಕುಂದಾಪುರ: ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ‘ಗ್ರಾಜುಯೇಷನ್ ಡೇ’

"ವಿದ್ಯಾರ್ಥಿಗಳು ಹೆತ್ತವರ ಗುರುಗಳ ಮತ್ತು ಸಮಾಜದ ಕಾಳಜಿ ವಹಿಸಿದಾಗ ಪಡೆದ ಪದವಿಗೆ ಗೌರವ"- ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಪ್ರೊ| ಹೇಮಂತ್ ಕುಮಾರ್

Views: 65

ಕುಂದಾಪುರ : ವಿದ್ಯಾರ್ಥಿಗಳು ಅವಕಾಶಗಳನ್ನು ಪ್ರೀತಿಸುವಂತಾಗಬೇಕು ಮತ್ತು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅವಕಾಶದೊಂದಿಗೆ ಅಭಿವೃದ್ಧಿ ಹೊಂದಿದಾಗ ಹೆತ್ತವರ, ಗುರುಗಳ ಮತ್ತು ಸಮಾಜದ ಕಾಳಜಿ ವಹಿಸಬೇಕು. ಆ ಮೂಲಕ ಪಡೆದ ಪದವಿಗೆ ಗೌರವ ದೊರೆಯುವಂತಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಪ್ರೊ| ಹೇಮಂತ್ ಕುಮಾರ್ ಹೇಳಿದರು. 

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಐಕ್ಯೂಎಸಿ ಸಂಯೋಜಿಸಿದ ‘ಗ್ರಾಜುಯೇಷನ್ ಡೇ’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಸುಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಬೇಕಾದರೆ ಶಿಕ್ಷಣವೇ ಮುಖ್ಯ. ಪದವಿ ಪೂರೈಸಿದ ನಂತರ ಉದ್ಯೋಗದೊಂದಿಗೆ ಸಾಮಾಜಿಕ ಕಾಳಜಿಯೊಂದಿಗೆ ವಿದ್ಯಾರ್ಥಿಗಳು ಬದುಕು ರೂಪಿಸಿಕೊಳ್ಳುವಂತಾಗಬೇಕು ಎಂದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಂದಾ ರೈ ಅತಿಥಿಗಳನ್ನು ಪರಿಚಯಿಸಿದರು.ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಮತ್ತು ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ಪದವೀಧರರ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ವಿನೋಲ್ ಮತ್ತು ನಯನಾ ಅನಿಸಿಕೆ ಹಂಚಿಕೊಂಡರು. ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಶ್ರೀಮತಿ ದೀಪಿಕಾ ಜಿ. ವಂದಿಸಿದರು. ನಿರ್ವಹಣಾ ವಿಭಾಗ ಪ್ರಾಧ್ಯಾಪಕರಾದ ಶ್ರೀ ಅವಿತಾ ಎಮ್. ಕೊರೆಯಾ ನಿರೂಪಿಸಿದರು.

2022-23ನೇ ಸಾಲಿನ ವಿಶ್ವವಿದ್ಯಾನಿಲಯದಿಂದ ಬಿ.ಕಾಂ.ಪದವಿಯಲ್ಲಿ ರ‍್ಯಾಂಕ್ ಪಡೆದ ಪ್ರತೀಕ್ಷಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಶ್ರೀ ಅಕ್ಷಯ್ ಕುಮಾರ್ ವಿದ್ಯಾರ್ಥಿನಿಯನ್ನು ಪರಿಚಯಿಸಿದರು.

Related Articles

Back to top button