ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಶಾಲೆಯ ಸೃಜನ್ ಗೆ ಚಿನ್ನದ ಪದಕ
Views: 120
ಕನ್ನಡ ಕರಾವಳಿ ಸುದ್ದಿ: ಮದರ್ ತೆರೆಸಾ ವಿದ್ಯಾಸಂಸ್ಥೆಯ 7ನೇ ತರಗತಿಯ ಕ್ರೀಡಾಪಟು ಸೃಜನ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ , ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆೆ.
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಡೆದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ,ಚಿನ್ನದ ಪದಕ ಪಡೆದು , ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಹೆಸರು ತಂದಿರುವ ಈ ಅತ್ಯುತ್ತಮ ಆಟಗಾರನಿಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭಕೋರಿದ್ದಾರೆ.






