ಇತರೆ

ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, ಬೈಕ್ ಸವಾರ ಸಾವು 

Views: 163

ಕನ್ನಡ ಕರಾವಳಿ ಸುದ್ದಿ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರ ಸರ್ಕಲ್‌ನಲ್ಲಿ ಜೂನ್ 2ರ ಮಂಗಳವಾರ ರಾತ್ರಿ ಜೀಪ್ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ಮಣೂರು ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿ, ಗಣೇಶ್ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಸರಿ ಸುಮಾರು 9:47 ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆ. 66ರ ಪ್ರಮುಖ ಭಾಗದಲ್ಲಿ ಅಳವಡಿಸಿದ ಸಿಸಿ ಕೆಮರಾದಲ್ಲಿ ಸಂಪೂರ್ಣ ಅಪಘಾತದ ದೃಶ್ಯಾವಳಿಗಳು ಸೆರೆಯಾಗಿದೆ.

ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

Related Articles

Back to top button
error: Content is protected !!