ಧಾರ್ಮಿಕ

ಕುಂದಾಪುರ ಧರ್ಮಗುರು ಮೌಲಾನ ಕರಾರ್ ಹುಸೇನ್: ಶಾಂತಿ, ಸೌಹಾರ್ದತೆಯ ಸಂದೇಶ

Views: 29

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಸಾಮಾಜಿಕ ಜಾಲದಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ ಗಳನ್ನು ಹಾಕಬಾರದು ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾ‌ರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ.

ಡ್ರಗ್ಸ್ ಸೇವನೆಯಿಂದ ಹಲವಾರು ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಹೆತ್ತವರು ತಮ್ಮ ಮಕ್ಕಳನ್ನು ಇಂತಹ ವಿಷ ಪದಾರ್ಥದಿಂದ ದೂರ ಇರಲು ಮಕ್ಕಳನ್ನು ಸಲಹೆ ನೀಡಬೇಕೆಂದು ಅವರು ಮನವಿ ಮಾಡಿದರು. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಸಾ ಪಾರಾಯಣ ನಡೆಯಿತು. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಸಾಮಾಜಿಕ ಜಾಲದಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ ಗಳನ್ನು ಹಾಕಬಾರದು ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾ‌ರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ.

 

Related Articles

Back to top button