ಇತರೆ

ಕುಂದಾಪುರ: ನಾಡ- ಬಡಾಕೆರೆಯಲ್ಲಿ ರೈಲಿಗೆ ಢಿಕ್ಕಿಯಾಗಿ ಚಿರತೆ ಸಾವು

Views: 335

ಕುಂದಾಪುರ : ನಾಡ ಗ್ರಾಮದ ಬಡಾಕೆರೆ ಎಂಬಲ್ಲಿ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ರೈಲು ಢಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

ಅರಣ್ಯದಿಂದ ಆಹಾರ ಅರಸಿಕೊಂಡು ಬಂದ ಐದು ವರ್ಷ ಪ್ರಾಯದ ಗಂಡು ಚಿರತೆ ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ತಿಳಿದುಬಂದಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಎಸಿಎಫ್‌ ಪ್ರಕಾಶ್‌ ಪೂಜಾರಿ, ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ, ಡಿಆರ್‌ಎಫ್‌ಒ ಮುರುಗನ್‌, ಬೀಟ್‌ ಫಾರೆಸ್ಟರ್‌ ರಾಮಪ್ಪ ಹಾಗೂ ಸಿಬಂದಿ ಚಿರತೆಯ ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಕುಂದಾಪುರ ವಲಯ ಅರಣ್ಯ ಇಲಾಖೆಯ ವಂಡ್ಸೆ ಡಿಪ್ಪೋದಲ್ಲಿ ಚಿರತೆಯ ಅಂತ್ಯ ಸಂಸ್ಕಾರ ನಡೆಸಲಾಯಿತು.

 

Related Articles

Back to top button
error: Content is protected !!