ಯುವಜನ

ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯ ಶವ ಗಂಗೊಳ್ಳಿಯ ನದಿ ತೀರದಲ್ಲಿ ಪತ್ತೆ

Views: 496

ಕನ್ನಡ ಕರಾವಳಿ ಸುದ್ದಿ: ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹೆಮ್ಮಾಡಿ ಸಂತೋಷನಗರದ ವಿದ್ಯಾರ್ಥಿ ನಮೇಶ್ ಎಂಬಾತ ಗುರುವಾರ ಬೆಳಿಗ್ಗೆ ಕಾಲೇಜಿಗೆ ತೆರಳಿದ್ದು ಸಂಜೆ ನಾಲ್ಕು ಗಂಟೆಯವರೆಗೂ ಕಾಲೇಜಿನಲ್ಲಿದ್ದು ಆನಂತರ ಸಂಜೆಯಾದರೂ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಹುಡುಕಾಟ ಮಾಡಿದಾಗ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.

ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ

ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್‌ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ‌ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಅನ್ನು ಬಿಟ್ಟು ನಾಪತ್ತೆಯಾಗಿದ್ದನು.Ok

ಗುರುವಾರ ವಿದ್ಯಾರ್ಥಿ ಪತ್ತೆಯಾಗದ ಕಾರಣ ಶುಕ್ರವಾರ ಕೂಡ ಹುಟುಕಾಟ ಮುಂದಿವರೆಸಿದ್ದು, ಅಗ್ನಿಶಾಮಕ‌ದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು. ಶನಿವಾರ ಬೆಳಿಗ್ಗೆ ಶವ ಪತ್ತೆಯಾಗಿದೆ

 

Related Articles

Back to top button
error: Content is protected !!