ಇತರೆ

ಕುಂದಾಪುರ ನೂತನ ಉಪ ವಿಭಾಗಾಧಿಕಾರಿ ಮಹೇಶ್ ಪಿ.ಎಸ್ ಅಧಿಕಾರ ಸ್ವೀಕಾರ

Views: 55

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಬೆಸ್ಕಾಂ)ನ ಪ್ರಧಾನ ವ್ಯವಸ್ಥಾಪಕರಾಗಿ ಸರಕಾರ ವರ್ಗಾವಣೆ ಮಾಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮಹೇಶ್ ಪಿ.ಎಸ್. ಅವರನ್ನು ನೇಮಕಗೊಳಿಸಿದೆ.

ಗುರುವಾರ ಇಲ್ಲಿನ ಮಿನಿ ವಿಧಾನಸೌಧದ ಎಸಿ ಕಚೇರಿಯಲ್ಲಿ ರಶ್ಮಿ ಎಸ್. ಆರ್ ಅವರು, ನೂತನ ಎಸಿ ಮಹೇಶ್ ಪಿ.ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದ ಮಹೇಶ್ ಪಿ.ಎಸ್. ಅವರು ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ವಿಶೇಷ ಭೂಸ್ವಾಧೀನಾಧಿಕಾರಿ ಯಾಗಿದ್ದರು. ಇದಕ್ಕೂ ಮೊದಲು ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಬಿಬಿಎಂಪಿಯಲ್ಲಿ ಸಹಾಯಕ ಆಯುಕ್ತರಾಗಿ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತಹಶಿಲ್ದಾರ್ ಆಗಿ ಸೇವೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!