ಕರಾವಳಿ
ಕುಂದಾಪುರ: ಬಸ್ರೂರಿನಲ್ಲಿ ಬೈಕ್ ಡಿಕ್ಕಿ ಸೈಕಲ್ ಸವಾರ ಸಾವು
Views: 329
ಕುಂದಾಪುರ: ಬಸ್ರೂರು ಜನತಾ ಕಾಲೋನಿಗೆ ಹೋಗುವ ರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಕಂಡ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಬೈಕ್ ಅತಿ ವೇಗದಿಂದ ಬಂದು ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಸವಾರ ಮಂಜುನಾಥ್( 54) ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ