ಕುಂದಾಪುರ: ಬೀಜಾಡಿಯಲ್ಲಿ ಗೋ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಸೆರೆ

Views: 152
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಬೀಜಾಡಿಯ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಬಂದು ಅಲ್ಲಿದ್ದ ದನ ಕಳವಿಗೆ ಯತ್ನಿಸಿದ ಪ್ರಕರಣದ ಓರ್ವ ಆರೋಪಿ ಸುರತ್ಕಲ್ ಮೂಲದ ಅಶ್ರಫ್ (40) ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆಪಡೆಯಲಾಗಿದೆ.
ರಿಟ್ಜ್ ಕಾರಿನಲ್ಲಿ ಬಂದ ನಾಲ್ಕು ಮಂದಿ ದನಕಳ್ಳರು ರಸ್ತೆ ಬದಿ ಮಲಗಿದ್ದ ದನದ ಕೈ ಕಾಲುಗಳನ್ನು ಕಟ್ಟಿ ಕಾರಿನ ಹಿಂಭಾಗದಲ್ಲಿ ತುಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು.
ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಸಿಸಿಟಿವಿ ಲೈವ್ ನಲ್ಲಿ ವೀಕ್ಷಣೆ ಮಾಡುತ್ತಿದ್ದ ಸಿಬ್ಬಂದಿ, ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪೊಲೀಸರನ್ನು ಕಂಡ ದುಷ್ಕರ್ಮಿಗಳು ಜಾನುವಾರುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ನಂಜಪ್ಪ ಎನ್. ಮಾರ್ಗದರ್ಶನದಲ್ಲಿ ಪೊಲೀ ಸರ ವಿಶೇಷ ಪತ್ತೆ ತಂಡ ಗೋ ಕಳ್ಳರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.






