ಇತರೆ
ಕುಂದಾಪುರ: ಮೂಡ್ಲಕಟ್ಟೆ ಬಳಿ ಗಾಂಜಾ ಸೇವನೆ ಯುವಕನ ವಿರುದ್ಧ ಪ್ರಕರಣ ದಾಖಲು
Views: 53
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಮೂಡ್ಲಕಟ್ಟೆ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿರುವ ಆರೋಪದಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಮೂಡ್ಲಕಟ್ಟೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಅಮಲು ಪದಾರ್ಥ ಸೇವಿಸಿರುವಂತೆ ಕಂಡುಬಂದಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಯುವಕನನ್ನು ವಿಚಾರಣೆ ನಡೆಸಿ, ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು.
ವೈದ್ಯಕೀಯ ಪರೀಕ್ಷೆಯಲ್ಲಿ ಯುವಕ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ವೈದ್ಯರು ದೃಢೀಕರಣ ಪತ್ರ ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ನೇರಳಕಟ್ಟೆ ಕರ್ಕುಂಜೆಯ ಖಲೀಲ್ ಎಂಬಾತನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






