ಇತರೆ

ಕುಂದಾಪುರ: ರೈಲಿನಲ್ಲಿ ಪ್ರಯಾಣಿಕರ ಮೊಬೈಲ್ ಕಳವು ಮಾಡಿ ಯುಪಿಐ ಮೂಲಕ ಹಣ ವರ್ಗಾವಣೆ ಮಾಡಿಕೊಂಡ ಆರೋಪಿ ಬಂಧನ

Views: 101

ಕನ್ನಡ ಕರಾವಳಿ ಸುದ್ದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್‌ಗಳನ್ನು ಕಳವು ಮಾಡಿ, ಅವುಗಳ ಮೂಲಕ ಯುಪಿಐ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಡುಪಿ ತಾಲೂಕು ಐರೋಡಿ ಗ್ರಾಮದ ಸಾಸ್ತಾನ ಗೋಳಿಬೆಟ್ಟುವಿನ ಪ್ರಹ್ಲಾದ್ (32) ಬಂಧಿತ ಆರೋಪಿ.

ಆಗಸ್ಟ್ 2ರಂದು ದೂರುದಾರ ರ್ಯೂಬೆನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಂದೂರು ರೈಲು ನಿಲ್ದಾಣದ ಸಮೀಪ ರೈಲಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಮೊಬೈಲ್‌ನ್ನು ಕಳವು ಮಾಡಿದ್ದರು. ಸುಮಾರು 17 ಸಾವಿರ ರೂ. ಮೌಲ್ಯದ ಮೊಬೈಲ್ ಕಳವು ಮಾಡಿದ ಬಳಿಕ ಅದರ ಮೂಲಕ ಯುಪಿಐ ಮುಖಾಂತರ 19,847 ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಅವರು ಪ್ರಹ್ಲಾದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳವು ಮಾಡಿದ್ದ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯ ವಿರುದ್ಧ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಮತ್ತು ದರೋಡೆ ಪ್ರಕರಣಗಳು ದಾಖಲಾಗಿವೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆ, ಬಂಟ್ವಾಳ ನಗರ, ಉಡುಪಿ ನಗರ, ಬ್ರಹ್ಮಾವರ, ಕೋಟಾ ಹಾಗೂ ಕುಂದಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಆರು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

Related Articles

Back to top button
error: Content is protected !!