ಕುಂದಾಪುರ ವಲಯ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Views: 101
ಕನ್ನಡ ಕರಾವಳಿ ಸುದ್ದಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಇಂದು ನಡೆದ ಕುಂದಾಪುರ ವಲಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಇಲ್ಲಿನ 10ನೇ ತರಗತಿಯ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪ್ರೀತಮ್.ಜಿ ಹಾಗೂ ರಿಷಿ ಶೆಟ್ಟಿ ಇವರು ಪ್ರಥಮ ಸ್ಥಾನ ಗಳಿಸಿ, ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ . ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಇಂದು ನಡೆದ ಕುಂದಾಪುರ ವಲಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಇಲ್ಲಿನ 10ನೇ ತರಗತಿಯ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪ್ರೀತಮ್.ಜಿ ಹಾಗೂ ರಿಷಿ ಶೆಟ್ಟಿ ಇವರು ಪ್ರಥಮ ಸ್ಥಾನ ಗಳಿಸಿ, ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.






