ಇತರೆ

ಕುಂದಾಪುರ ಶೂಟೌಟ್ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

Views: 46

ಕನ್ನಡ ಕರಾವಳಿ ಸುದ್ದಿ: ನಗರದ ಚರ್ಚ್ ರಸ್ತೆಯಲ್ಲಿ   ಬಾರ್ಕೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ಗುಂಡಿಕ್ಕಿ ಕೊಲೆಗೈದ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾ (55) ಎಂಬಾತನನ್ನು ಬುಧವಾರ ಕುಂದಾಪುರ ಪೊಲೀಸರು ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಸ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಆರೋಪಿಯನ್ನು ಭಟ್ಕಳದ ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆ.1 ರಂದು ಪೊಲೀಸರು ಬಂಧಿಸಿದ್ದು ಹೆಚ್ಚಿನ ತನಿಖೆಗಾಗಿ ಆ.2 ರಂದು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ ಬಹುತೇಕ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

Related Articles

Back to top button
error: Content is protected !!