ಇತರೆ

ಕುಂದಾಪುರ: ಶೆಟ್ರಕಟ್ಟೆ ತಿರುವಿನಲ್ಲಿ ಓವ‌ರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

Views: 945

play-sharp-fill

ಕನ್ನಡ ಕರಾವಳಿ ಸುದ್ದಿ:  ಬಸ್ ಓವರ್ ಟೇಕ್ ಮಾಡಲು ಹೋಗಿ ಇನ್ನೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಮೃತ ಯುವಕ.

ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದಾಗ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತ್ತೀಚೆಗಷ್ಟೇ ಟಿಪ್ಪ‌ರ್ ಹಾಗೂ ಸರ್ಕಾರಿ ಬಸ್ ನಡುವೆ ಶೆಟ್ರಕಟ್ಟೆಯಲ್ಲಿ ನಡೆದ ಭೀಕರ ಅಪಘಾತ ನೆನಪು ಮಾಸುವ ಮುನ್ನವೇ ಅದೇ ಸ್ಥಳದ ಅನತಿ ದೂರದಲ್ಲೇ ಮತ್ತೊಂದು ಅಪಘಾತ ಸಂಭವಿಸಿರುವುದು ಸ್ಥಳೀಯರನ್ನು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ 3 ಆಕ್ಸಿಡೆಂಟ್ ಆಗಿದ್ದು, ಅದರಲ್ಲಿ ಇಬ್ಬರು ಮರಣ ಹೊಂದಿದ್ದಾರೆ.

Related Articles

Back to top button
error: Content is protected !!