ಶಿಕ್ಷಣ
ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ
Views: 32
ಕನ್ನಡ ಕರಾವಳಿ ಸುದ್ದಿ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ವೃತ್ತಿ ಮಾರ್ಗದರ್ಶನ ವಿಭಾಗ ಮತ್ತು The Institute of Charted Accounts of India, Udupi Branch (SIRC) ಸಹಯೋಗದಲ್ಲಿ ಅಗಸ್ಟ್ 21 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ CA, CS ಮತ್ತು ಇತರ ಕೋರ್ಸ್ಗಳ ಬಗ್ಗೆ ವಿವರವಾದ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾದ CA ವಸಂತ ಶ್ಯಾನುಭೋಗ್ ವಿ.ರವರು ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಚಂದ್ರಶೇಖರ, ವೃತಿ ಮಾರ್ಗದರ್ಶನ ಸಂಯೋಜಕರಾದ ಶ್ರೀ ದಿನಕರ ಶೆಟ್ಟಿ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. CA ಅಶ್ವತ್ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, CA ಅಕ್ಷತಾ ವಂದಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.






