ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
Views: 32
ಕನ್ನಡ ಕರಾವಳಿ ಸುದ್ದಿ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ವೃತ್ತಿ ಮಾರ್ಗದರ್ಶನ ವಿಭಾಗ ಮತ್ತು ಉದ್ಯೋಗ ವಿನಿಮಯ ಕಛೇರಿ, ಉಡುಪಿ ಇವರು ದಿನಾಂಕ 03-09-2026 ರಂದು ಜಂಟಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು.
ಶ್ರೀಮತಿ ಲಕ್ಷ್ಮೀ ಸುವರ್ಣ ಮತ್ತು ಕು.ಲತಾರವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.
ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉದ್ಯೋಗ ನೋಂದಣಿಯನ್ನು ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೃತಿ ಮಾರ್ಗದರ್ಶನ ಸಂಯೋಜಕರಾದ ಶ್ರೀ ದಿನಕರ ಶೆಟ್ಟಿ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಚಂದ್ರಶೇಖರ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ಶ್ರೀಮತಿ ಜ್ಯೋತ್ಸ್ನಾ ಪೈ ರವರು ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನವಿ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.






