ಆರೋಗ್ಯ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ಲೈಂಗಿಕ ದೌರ್ಜನ್ಯ ಆರೋಪಿ ಡಾ. ರಾಬರ್ಟ್‌ ರೆಬೆಲ್ಲೋ ಮುಂಬಯಿಯಲ್ಲಿ ಬಂಧನ

Views: 423

ಕುಂದಾಪುರ:ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿರುವ, ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್‌ ರೆಬೆಲ್ಲೋ ಅವರನ್ನು ಶುಕ್ರವಾರ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.

ಮುಂಬಯಿಯ ಐಷಾರಾಮಿ ರೆಸಾರ್ಟ್‌ ಒಂದರಲ್ಲಿ ಇದ್ದ ವೈದ್ಯರನ್ನು ತನಿಖೆಯ ಜಾಡು ಹಿಡಿದು ಹುಡುಕಿ ಪತ್ತೆ ಮಾಡಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ

ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಗಂಭೀರ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರದ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಡಾ. ರಾಬರ್ಟ್ ರೆಬೆಲ್ಲೋ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಮಹಿಳಾ ವೈದ್ಯೆ 2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿಕೊಂಡಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಮೊಬೈಲ್ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದರಂತೆ. ಜೊತೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.

ಕರ್ತವ್ಯದ ಸಮಯ ಮತ್ತು ಮುಗಿದ ಮೇಲೆ ರಾತ್ರಿ ಮೆಸೇಜ್ ಮಾಡುತ್ತಾರೆ. ವಿಡಿಯೋ ಕಾಲ್ ಮಾಡಿ ಎಂದು ಕಿರುಕುಳ ನೀಡುತ್ತಿದ್ದಾರೆ ಎನ್ನುವುದಾಗಿ ಮಹಿಳಾ ವೈದ್ಯೆ ದೂರು ದಾಖಲಿಸಿದ್ದಾರೆ ಹೀಗಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

 

 

 

 

.

Related Articles

Back to top button