ಇತರೆ
ಕುಂದಾಪುರ ಸೇರಿದಂತೆ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ
Views: 101
ಕನ್ನಡ ಕರಾವಳಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್ – ನಿಕೋಬಾರ್ ದ್ವೀಪದಲ್ಲಿ ತೇವಾಂಶ ಭರಿತ ಮೋಡದ ಕಾರಣ ಕುಂದಾಪುರ ಸೇರಿದಂತೆ ಉಡುಪಿ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಗುರುವಾರ ಸಂಜೆ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗಿದೆ.
ಹವಮಾನ ಇಲಾಖೆ ಪ್ರಕಾರ ಮುಂದಿನ 4 ದಿನ ಬಿರುಸಾಗಿ ಮಳೆಯಾಗಲಿದೆ ಮುನ್ಸೂಚನೆ ಕೊಟ್ಟಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ. ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರದಲ್ಲಿ ಏ.15ರಿಂದ ಏ.18ವರೆಗೆ ಬಿರುಗಾಳಿ ಸಹಿತ ವರ್ಷಧಾರೆಯಾಗಲಿದೆ ಹವಾಮಾನ ಮುನ್ಸೂಚನೆ ನೀಡಿದೆ. ಈ ಸಂದರ್ಭದಲ್ಲಿ ಕೆಲ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ 4 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.






