ಇತರೆ
ಕುಂದಾಪುರ: ಹಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸಾವು
Views: 51
ಕನ್ನಡ ಕರಾವಳಿ ಸುದ್ದಿ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಹಂಗಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ (42) ಎಂದು ಗುರುತಿಸಲಾಗಿದೆ.
ಅವರು ಕೆಲಸ ಮಾಡಿ ಕಟ್ಟಡದ 1ನೇ ಮಹಡಿಯಲ್ಲಿ ಉಳಿದುಕೊಂಡಿದ್ದು, ಸೆ.1ರಂದು ರಾತ್ರಿ ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.3ರಂದು ರಾತ್ರಿ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






