ಕ್ರೀಡೆ
ಕುಂದಾಪುರ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Views: 73
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.







