ಧಾರ್ಮಿಕ

ಕುಂದಾಪುರ :ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ

Views: 261

ಕುಂದಾಪುರ :ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ ಚಪ್ಪಲಿ ಹಾಕಿಕೊಂಡು ದೇವರಿಗೆ ‌ ಕೈ ಮುಗಿದ ಬಳಿಕ ಕಳ್ಳತನ ಕೃತ್ಯ ಎಸಗಿದ್ದ ಕುರಿತು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಹಣ ಕಳವು ಮಾಡಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ್ದಾರೆ ಅಂದಾಜು 40 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!