ಇತರೆ

ಕುಂದಾಪುರ ಹೋಟೆಲ್‌ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿ ಸಾವು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ!

Views: 80

ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಹೋಟೆಲ್‌ನಲ್ಲಿ ರಾತ್ರಿ ಪಾಳಿಯ ಕೆಲಸ ಮುಗಿಸಿ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಬೆಳಿಗ್ಗೆ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಗುಜ್ಜಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಮ ಕೊರಗ ಖಾರ್ವಿ (46) ಎಂದು ಗುರುತಿಸಲಾಗಿದೆ.

ಇವರು ಕುಂದಾಪುರದ ಶರೋನ್ ಹೋಟೆಲ್‌ನ ಬಂಜಾರ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಸ್ಟೀವಾರ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ನ. 18ರಂದು ರಾತ್ರಿ ಹೋಟೆಲ್‌ನ ಕೆಲಸ ಮುಗಿಸಿದ ಬಳಿಕ ಹೋಟೆಲ್ ಸಮೀಪದಲ್ಲಿರುವ ಕೆಲಸಗಾರರ ವಿಶ್ರಾಂತಿ ಕೊಠಡಿಯಲ್ಲಿ ರಾಮ ಖಾರ್ವಿ ಮಲಗಿದ್ದರು.

ನ.19ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಇತರ ಕೆಲಸಗಾರರು ಎದ್ದು ನೋಡಿದಾಗ ಅವರು ಮಲಗಿದ್ದಲ್ಲೇ ಇದ್ದು, ಬಾಯಿಯಿಂದ ನೀರು ಹೊರಬರುತ್ತಿರುವುದು ಕಂಡುಬಂದಿದೆ. ಮಾತನಾಡುವ ಸ್ಥಿತಿಯಲ್ಲಿರದ ಅವರನ್ನು ತಕ್ಷಣ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.ಮೃತರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಮೃತರ ಸಹೋದರ ಎಂ. ದೇವದಾಸ ಖಾರ್ವಿ (70) ಅವರು ಕುಂದಾಪುರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!