ಇತರೆ
ಕುಣಿಗಲ್: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ನಾಲ್ವರು ಸಾವು
Views: 45
ಕನ್ನಡ ಕರಾವಳಿ ಸುದ್ದಿ : ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ಸಮೀಪ ನಡೆದಿದೆ.
ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಸಮೀಪ ಜಿಗಣಿ ಪಾಳ್ಯದ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಂಡ್ಯ ಜಿಲ್ಲೆ ಸುವರ್ಣಸಂದ್ರ ಮೂಲದ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಗಾಯತ್ರಿ(68), ನರಸಿಂಹ (65) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರ ವಿವರ ತಿಳಿಯಬೇಕಿದೆ.
ಮೃತರು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಮಂಡ್ಯ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಕುಣಿಗಲ್ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.






