ಜನಮನ
ಕುಮಾರಸ್ವಾಮಿ ಆರೋಗ್ಯ ಈಗ ಹೇಗಿದೆ ? ಅಪೋಲೋ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಬಿಡುಗಡೆ

Views: 0
ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ನಗರದ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಗ್ಯದ ವಿಚಾರದಲ್ಲಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಅಪೋಲೋ ಆಸ್ಪತ್ರೆ ಕಡೆಯಿಂದ ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು ಯಾರು ಆತಂಕ ಗೊಳ್ಳುವ ಅವಶ್ಯಕತೆ ಇಲ್ಲ ಎನ್ನುವ ಸ್ಪಷ್ಟ ಚಿತ್ರಣ ಇದರಿಂದ ಸಿಕ್ಕಿದೆ. ಆಸ್ಪತ್ರೆ ಬಿಡುಗಡೆ ಮಾಡಿರುವ ಪ್ರಕಟಣೆ ಪ್ರಕಾರ ತಡರಾತ್ರಿ 3.10ರ ಹೊತ್ತಿಗೆ ಕೊಂಚ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ತಕ್ಷಣ ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ.
ವೀಕ್ನೆಸ್ ಮತ್ತು ಸುಸ್ತಾಗಿ ಕುಮಾರಸ್ವಾಮಿ ಬಳಲುತ್ತಿದ್ದರು. ಈಗ ಚಿಕಿತ್ಸೆ ಕೊಡಲಾಗಿದ್ದು, ಚಿಕಿತ್ಸೆಗೆ ಸಕಾರಾತ್ಮಕ ವಾಗಿ ಸ್ಪಂದಿಸುತ್ತಿದ್ದಾರೆ. ಈಗ ಅವರ ಆರೋಗ್ಯ ಸ್ಥಿತಿ ಚೇತರಿಕೆ ಕಂಡಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರಾದ ಡಾ. ಪಿ. ಸತೀಶ್ ಚಂದ್ರ ಮಾಧ್ಯಮ ಪ್ರಕಟಣೆಯ ಮೂಲಕ ಹೇಳಿದ್ದಾರೆ.






