ರಾಜಕೀಯ

ಕೃಷಿ ಸಾಲ ಮನ್ನಾ..? ಪರಿಶೀಲಿಸಿ ನಿರ್ಧಾರ: ಸಿಎಂ ಡಿ.ಕೆ. ಶಿವಕುಮಾರ್

Views: 67

ಕನ್ನಡ ಕರಾವಳಿ ಸುದ್ದಿ: ರೈತರ ಸಾಲ ಮನ್ನಾ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಲಬುರಗಿ ಕಂದಾಯ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಬಗ್ಗೆ ಪರಾಮರ್ಶ ನಡೆಸಲಾಗುವುದು. ಕಲಬುರಗಿ ವಿಭಾಗದ ಅಧಿಕಾರಿಗಳ ಸಭೆ ಇಂದು ನಡೆಸಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಬೆಳಗಾವಿಗೆ ತೆರಳಿ ಅಲ್ಲೂ ಪರಾಮರ್ಶೆ ಮಾಡಲಾಗುವುದು. ರೈತರದು ಎಷ್ಟು ಸಾಲ ಇದೆ. ಯಾವ ಬಗೆಯ ಸಾಲ ಇದೆ. ಎಲ್ಲಾ ಪರಿಶೀಲಿಸಿ ನಿರ್ಣಯ ಮಾಡಲಾಗುವುದು’ ಎಂದು ಪ್ರತಿಕ್ರಿಯಿಸಿದರು.

ನೆರೆಯ ಮಹಾರಾಷ್ಟ್ರ, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡುವ ತೀರ್ಮಾನ ಮಾಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಾಲ ಮನ್ನಾ ಮಾಡುವ ಬಗ್ಗೆ ಖಚಿತವಾಗಿ ಏನನ್ನೂ ಹೇಳದೆ, ಯಾವ ಸಾಲ ಇದೆ, ಏನು ಸಾಲ ಇದೆ, ಎಲ್ಲಿ ಸಾಲ ಇದೆ ಎಲ್ಲವನ್ನು ನೋಡುತ್ತೇನೆ. ಮುಂದೆ ಸಾಲ ಮನ್ನಾದ ಬಗ್ಗೆ ಮಾತನಾಡುತ್ತೇನೆ ಎಂದಷ್ಟೇ ಉತ್ತರಿಸಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಗೃಹಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಈ ಸಂದರ್ಭದಲ್ಲಿದ್ದರು.

 

Related Articles

Back to top button
error: Content is protected !!