ಇತರೆ
ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ದಾರುಣ ಸಾವು

Views: 48
ಕನ್ನಡ ಕರಾವಳಿ ಸುದ್ದಿ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಏಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೇದಿರೇನಹಳ್ಳಿಯಲ್ಲಿ ನಡೆದಿದೆ.
ಚಿಂತಾಮಣಿ ತಾಲೂಕಿನ ಮುಂತಕೇದಿರೇನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮುಂತಕೇದಿರೇನಹಳ್ಳಿಯ ಶ್ರೀಕಾಂತ್ (25) ಲೋಕೇಶ್ (28) ಮತ್ತು ರಮೇಶ್ (24) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.