ಜನಮನ
ಕೆಎಸ್ಆರ್ಟಿಸಿ ಬಸ್- ಕಾರು ಅಪಘಾತ :ಐವರು ಸ್ಥಳದಲ್ಲೇ ಸಾವು

Views: 48
ರಾಮನಗರ : ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.
ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ.






