ರಾಜಕೀಯ
ಕೆಪಿಸಿಸಿ ಸದಸ್ಯರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ನೇಮಕ

Views: 47
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಅವರನ್ನು ಕೆಪಿಸಿಸಿ ಸದಸ್ಯರನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.
ಶಿವರಾಮ ಶೆಟ್ಟಿ 18 ವರ್ಷಗಳ ಕಾಲ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, 2013ರಲ್ಲಿ ಕುಂದಾಪುರದಿಂದ ವಿಧಾನಸಭೆಗೆ ವಿಧಾನಸಭೆಗೆ ಸ್ಪರ್ಧಿಸಿದ್ದರು. ಪ್ರಸ್ತುತ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ದೈವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ, ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.