ಕೆಮಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿಕೊಂಡ ಬೆಂಕಿ: 9 ಮಂದಿ ಸಜೀವ ದಹನ

Views: 0
ಹೈದರಾಬಾದ್(ತೆಲಂಗಾಣ), ನಗರದ ನಾಂಪಲ್ಲಿ ಪ್ರದೇಶದ ಅಪಾರ್ಟ್ಮೆಂಟ್ ಸಂಕೀರ್ಣದ ಗೋದಾಮಿನಲ್ಲಿ ಇಂದು ಬೆಳಿಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ದೀಪಾವಳಿ ಹಬ್ಬದ ಸಮಯದಲ್ಲಿ ಈ ದುರಂತ ಸಂಭವಿಸಿದೆ.
ನಾಂಪಲ್ಲಿಯ ಬಜಾರ್ಘಾಟ್ನ ಅಗ್ನಿ ಅವಘಡ ಸಂಭವಿಸಿದ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಗಾಯಗೊಂಡಿರುವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಐದು ಅಂತಸ್ತಿನ ಕಟ್ಟಡದಲ್ಲಿ ಮೆಕ್ಯಾನಿಕಲ್ ಅಂಗಡಿ ಮತ್ತು ನೆಲ ಅಂತಸ್ತಿನಲ್ಲಿ ಕೆಮಿಕಲ್ ಗೋದಾಮಿನಲ್ಲಿ ಇತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಕೆಮಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಲಿನ ಮಹಡಿಗಳಲ್ಲಿ ವಾಸಿಸುವ ಜನರನ್ನು ಕಿಟಕಿಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಕೆಮಿಕಲ್ ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಇತರ ಮಹಡಿಗಳಿಗೂ ವ್ಯಾಪಿಸಿದೆ.
ಪ್ರಾಥಮಿಕ ಅಂದಾಜಿನ ಪ್ರಕಾರ, ಕಾರು ರಿಪೇರಿ ಮಾಡುವಾಗ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಯ ನಡುವೆ ನಡೆಸಲಾದ ಧೈರ್ಯಶಾಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಒಂದು ಮಗು ಮತ್ತು ಮಹಿಳೆಯನ್ನು ಕಟ್ಟಡದಿಂದ ಹೊರತೆಗೆಯುವುದರ ವಿಡಿಯೋ ಫೂಟೇಜ್ ಲಭ್ಯವಾಗಿದೆ ಎಂದು ಕೇಂದ್ರ ವಲಯ ಡಿಸಿಪಿ ವೆಂಕಟೇಶ್ವರ್ ರಾವ್ ತಿಳಿಸಿದ್ದಾರೆ
ಹೈದರಾಬಾದ್ನಲ್ಲಿ ನಡೆದ ಮತ್ತೊಂದು ಅಗ್ನಿ ಅವಘಡದಲ್ಲಿ, ಓಲ್ಡ್ ಸಿಟಿಯ ಮೀರ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಒಂದು ಚಪ್ಪಲಿ ಗೋದಾಮು ಸೇರಿದಂತೆ ಐದು ಗೋದಾಮಿಗಳಲ್ಲಿ ನಿನ್ನೆ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಕಟ್ಟಡದ ಎರಡು ಮತ್ತು ಮೂರನೇ ಮಹಡಿಯಲ್ಲಿ ಬೆಂಕಿ ವ್ಯಾಪಿಸಿದೆ. ಸಂಜೆಯ ವೇಳೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ದೀಪಾವಳಿ ನಿಮಿತ್ತ ಕಾರ್ಖಾನೆಯಲ್ಲಿ ಯಾರೂ ಇಲ್ಲದ ಕಾರಣ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.







