ಜನಮನ

ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ: ಪತ್ತೆಗಾಗಿ ಮನವಿ

Views: 1

ಕನ್ನಡ ಕರಾವಳಿ ಸುದ್ದಿ: ಅರ್ಚನಾ (35) ಎಂಬವರು ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ ಸೆಪ್ಟೆಂಬರ್ 17 ರಂದು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ: ಎತ್ತರ 5 ಅಡಿ, ದುಂಡು ಮುಖ, ದಪ್ಪ ಶರೀರ, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ ಧರಿಸಿದ್ದರು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button
error: Content is protected !!