ಇತರೆ

ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ದಂಧೆಗೆ ಬಳಕೆ, ಮೂವರ ಸೆರೆ

Views: 45

ಕನ್ನಡ ಕರಾವಳಿ ಸುದ್ದಿ: ಕೆಲಸ ಕೊಡಿಸುವುದಾಗಿ ಅಮಾಯಕ ಹೆಣ್ಣು ಮಕ್ಕಳನ್ನು ಕರೆ ತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ.‌ ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಲಾಗಿದೆ. ಸಿಂಧನೂರು ಹೊರವಲಯದ ನ್ಯಾಷನಲ್ ಲೇಔಟ್‌ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಕಿಂಗ್ ಪಿನ್ ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ.

ದಂಧೆಗಾಗಿಯೇ ಮನೆಯನ್ನ ಬಾಡಿಗೆ ಪಡೆದಿದ್ದು ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಹೆಣ್ಣುಮಕ್ಕಳನ್ನ ದಂಧೆಗೆ ಅಭಿಷೇಕ್ ಬಳಸುತ್ತಿದ್ದ ಎನ್ನಲಾಗಿದೆ. ಸದ್ಯ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೇಸ್ ಸಂಬಂಧ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Related Articles

Back to top button
error: Content is protected !!