ಜನಮನ

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರದ ಹಣ ಬಿಡುಗಡೆ

Views: 26

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರದ ಹಣ ಬಿಡುಗಡೆಯಾಗಿದೆ. ಸುಪ್ರೀಂಕೋರ್ಟ್ ಗೆ ಬರ ಪರಿಹಾರದ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದ್ದು, ಅದರಂತೆ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿದೆ.

ಕೇಂದ್ರ ಹಣಕಾಸು ಇಲಾಖೆಯಿಂದ ಬರ ಪರಿಹಾರದ ಹಣ ಬಿಡುಗಡೆಯಾಗಿದೆ. ಈ ಬಗ್ಗೆ ಕೇಂದ್ರದ ಹಣಕಾಸು ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಇನ್ನು ಕಳೆದ ವರ್ಷ ರಾಜ್ಯ ಸರ್ಕಾರ 18,174 ಕೋಟಿ ಹಣ ನೀಡಬೇಕಾಗಿ ಕೇಂದ್ರಕ್ಕೆ ಬೇಡಿಕೆ ಇಟ್ಟಿತ್ತು. ಈ ಬಗ್ಗೆ ರಾಜ್ಯ ಸರ್ಕಾರ ಆಗಾಹಾ ವಾಗ್ದಾಳಿ ಕೂಡ ನಡೆಸಿತ್ತು. ಆದರೆ ಇಷ್ಟು ದಿನವಾದರೂ ಕೇಂದ್ರ ಸರ್ಕಾರ ಮಾತ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಿರಲಿಲ್ಲ. ಇದೇ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಅದರಂತೆಯೇ ಇದೀಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನಿಧ ಬಿಡುಗಡೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಬಳಿ ತಿಳಿದಿದೆ.ಆ ಕಾರಣ 3,454 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿದೆ.

Related Articles

Back to top button
error: Content is protected !!