ರಾಜಕೀಯ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ!
Views: 47
ಕನ್ನಡ ಕರಾವಳಿ ಸುದ್ದಿ: ನೀಟ್ ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ಬಳಿಕ ನಡೆದಿರುವ ಮಹತ್ವದ ಬೆಳವಣಿಗೆಯಲ್ಲಿ ಇದೀಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ(CJP) ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ.
ಪರೀಕ್ಷಾ ಅಕ್ರಮ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ದೆಹಲಿಯಲ್ಲಿ ತಮ್ಮ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ತಿಂಗಳ ಸುದೀರ್ಘ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.






