ಇತರೆ

ಕೈದಿ ಜೊತೆ ಸಂಪರ್ಕ, ಹಣ ವರ್ಗಾವಣೆ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು 

Views: 33

ಕನ್ನಡ ಕರಾವಳಿ ಸುದ್ದಿ: ಬೆಳಗಾವಿ ಜೈಲಿನಲ್ಲಿದ್ದ ಕೈದಿಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್‌ಪೆಕ್ಟರ್ ಜಯಶ್ರೀ ಅವರನ್ನು ಅಮಾನತುಗೊಳಿಸಲಾಗಿದೆ.

ಕೈದಿಯೊಂದಿಗೆ ಸಂಪರ್ಕ, ಹಣ ವರ್ಗಾವಣೆ ಸೇರಿದಂತೆ ಹಲವು ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಆಂತರಿಕ ವಿಚಾರಣೆ ನಡೆಸಿತ್ತು. ಬೆಳಗಾವಿ ಜೈಲಿನಲ್ಲಿದ್ದ ಸಾಯಿಕುಮಾರ್ ಎಂಬ ಕೈದಿಯೊಂದಿಗೆ PSI ಜಯಶ್ರೀ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಇದೇ ವೇಳೆ ಕೈದಿಯ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

ಈ ಎಲ್ಲಾ ಆರೋಪಗಳು ಹಾಗೂ ವಿಚಾರಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವಿಚಾರಣೆ ನಡೆಸಿತ್ತು. ವಿಚಾರಣೆಯ ಬಳಿಕ ಇದೀಗ ಜಯಶ್ರೀ ವಿರುದ್ಧ ಅಮಾನತು ಕ್ರಮ ಕೈಗೊಳ್ಳಲಾಗಿದೆ.ಆಂತರಿಕ ಭದ್ರತಾ ವಿಭಾಗದ ಐಜಿಪಿ ಅವರು ಜಯಶ್ರೀ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

 

Related Articles

Back to top button
error: Content is protected !!