ಕರಾವಳಿ

ಕೈಮಗ್ಗ ಉತ್ಪನ್ನಗಳ ಬಳಕೆ ಹೆಚ್ಚಿಸಿಕೊಂಡು ನೇಕಾರರಿಗೆ ಎಲ್ಲರ ಪ್ರೋತ್ಸಾಹ ಅಗತ್ಯ :ಡಾ. ರಾಜೇಂದ್ರ ಕುಮಾರ್ 

Views: 2

ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ವತಿಯಿಂದ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರ ಸೇವಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಸೋಮವಾರ ಪಿಪಿಸಿ ಅಡಿಟೋರಿಯಂ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕೈಮುಗ್ಗ ದಿನಾಚರಣೆಯನ್ನು ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು.

ರಾಜೇಂದ್ರ ಕುಮಾರ್ ಅವರು ಮಾತನಾಡಿ,ಕೈಮಗ್ಗ ಉತ್ಪನ್ನಗಳ ಬಳಕೆ ಹೆಚ್ಚಬೇಕಾಗಿದೆ. ಆ ನಿಟ್ಟಿನಲ್ಲಿ ನೈಕಾರಿಕೆಗೆ ಸರಕಾರ, ಸಂಘ ಸಂಸ್ಥೆಗಳು, ಸಾರ್ವಜನಿಕರು ಒಟ್ಟಾಗಿ ಪ್ರೋತ್ಸಾಹ ನೀಡಬೇಕು ಎಂದರು.

ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಕೈಮಗ್ಗ ನೇಕಾರಿಕೆಗೆ ಜಿಲ್ಲಾಡಳಿತವು ಸಂಪೂರ್ಣ ನೆರವು ನೀಡಲಿದೆ. ಕೈಮಗ್ಗ ಪುನಶ್ಚೇತನಕ್ಕೆ ಸರಕಾರದ ಹಲವು ಯೋಜನೆಗಳು, ಸೌಲಭ್ಯಗಳಿದ್ದು, ನೇಕಾರ ಸಮಾಜದ ಮಹಿಳೆಯರನ್ನು ಗುರುತಿಸಿ ಸವಲತ್ತು,ತರಬೇತಿ, ನೀಡಲಾಗುತ್ತಿದೆ.ಮುಂದಿನ ದಿನಗಳಲ್ಲಿ ನೇಕಾರರಿಗೆ ಜಿಲ್ಲಾಡಳಿತ ನಿರಂತರ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಅಧ್ಯಕ್ಷ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಯಶಪಾಲ್ ಸುವರ್ಣ, ಮಾಜಿ ಸಂಸದ ಕೆ. ಸಿ ಕೊಂಡಯ್ಯ, ಆರ್ಥಿಕ ತಜ್ಞ ಜಗದೀಶ್ ಶೆಟ್ಟಿಗಾರ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಕೈಮಗ್ಗ ದಿನಾಚರಣೆ ಆಯೋಜನಾ ಸಮಿತಿ ಗೌರವಾಧ್ಯಕ್ಷ ಡಾ. ಜಗದೀಶ್ ಶೆಟ್ಟಿ ಆತ್ರಾಡಿ, ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ, ರಾಜೇಶ್ ರಾವ್ ಪಾಂಗಳ, ಅಶೋಕ್ ಕುಮಾರ್ ಶೆಟ್ಟಿ, ಜವಳಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಶಿವಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ನಬಾರ್ಡ್ ಸಂಗೀತಾಕರ್ತ ಸಹಕಾರ ಇಲಾಖೆ ಉಪನಿಬಂಧಕ ಅರುಣ್ ಕುಮಾರ್,ನಗರಸಭೆಯ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪ್ರಭಾಕರ್ ಪೂಜಾರಿ, ಲಯನ್ಸ್ ಜಿಲ್ಲಾ ಗವರ್ನರ್ ನೇರಿ  ಕರ್ನೇಲಿಯೋ, ಪ್ರಭಾ ಶಂಕರ್, ಕಿನ್ನಿಮೂಲ್ಕಿ ನೇಕಾರ ಸೇವಾ ಸಹಕಾರ ಸಂಘದ ಪ್ರಮುಖರಾದ ದಿನೇಶ್ ಕುಮಾರ್, ಶಶಿಕಾಂತ್, ಸುರೇಶ್ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಪದ್ಮಶಾಲಿ ನೇಕಾರ ಪ್ರತಿಷ್ಠಾನ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಸ್ವಾಗತಿಸಿದರು. ಉಪಾಧ್ಯಕ್ಷ ಮಂಜುನಾಥ್ ಮಣಿಪಾಲ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button