ಕರಾವಳಿ
ಕೊಡಗು SSLC ವಿದ್ಯಾರ್ಥಿನಿ ಹತ್ಯೆ ಮಾಡಿದ ಆರೋಪಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

Views: 324
ಕೊಡಗು: SSLC ವಿದ್ಯಾರ್ಥಿನಿಯ ರುಂಡ ಕತ್ತರಿಸಿ ತಲೆ ಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ. ನಿನ್ನೆ ರಾತ್ರಿ ಆರೋಪಿ ಪ್ರಕಾಶ್, ಬಾಲಕಿಯನ್ನು ಭಯಾನಕವಾಗಿ ಕೊಂದು ರುಂಡವನ್ನು ತೆಗೆದುಕೊಂಡು ಹೋಗಿದ್ದ. ಪ್ರಕಾಶ್ ಎಲ್ಲಿಗೆ ಹೋಗಿದ್ದಾನೆ ಅನ್ನೋದು ಯಾರಿಗೂ ತಿಳಿದಿರಲಿಲ್ಲ
ಕೊಲೆಯಾದ ಬಾಲಕಿಯ ರುಂಡದ ಜೊತೆಗೆ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಲು ಬಲೆ ಬೀಸಿದ್ದರು. ಇದೀಗ ಬಂದ ಮಾಹಿತಿ ಪ್ರಕಾರ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನ್ನ ಮನೆಯ ಸಮೀಪದಲ್ಲೇ ಪ್ರಕಾಶ್ ನೇಣಿಗೆ ಶರಣಾಗಿದ್ದಾನೆ. ಕೊಲೆಗಾರ ಪ್ರಕಾಶ್ ಮೃತದೇಹ ಪತ್ತೆಯಾದರೂ ಕೊಲೆಯಾದ ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.






