ರಾಜಕೀಯ

ಕೊನೆಗೂ ಹಾಸನ, ಮಂಡ್ಯ,ಕೋಲಾರ ಜೆಡಿಎಸ್‌ ಸ್ಪರ್ಧೆ: ಕುಮಾರಸ್ವಾಮಿ ಘೋಷಣೆ

Views: 45

ಬೆಂಗಳೂರು,  ಆಡಳಿತರೂಢ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ರಣತಂತ್ರವನ್ನು ಹೆಣೆಯಲೂ ಮೈತ್ರಿಯಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಕುರಿತು ಕ್ಷೇತ್ರ ಹಂಚಿಕೆ ಕುರಿತು ಹಲವು ಸುತ್ತಿನ ಮಾತುಕತೆಯನ್ನು ಜೆಡಿಎಸ್‌ ನಡೆಸಿದ್ದು, ಕೊನೆಗೂ ಜೆಡಿಎಸ್‌ ಮೂರು ಕ್ಷೇತ್ರಗಳನ್ನು ಪಡೆದುಕೊಂಡಿದೆ.

,ಈ ಕುರಿತು ಜೆಡಿಎಸ್‌ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ, ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಘೋಷಣೆ ಮಾಡಿದರು. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಬಿಜೆಪಿಗೆ 25 ಕ್ಷೇತ್ರ ಮೂರು ಕ್ಷೇತ್ರಗಳಲ್ಲಿ ನಾವು ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳ ಘೋಷಣೆ ಹಾಗೂ ಕ್ಷೇತ್ರಗಳ ಹಂಚಿಕೆ ವಿಳಂಬ ಆಗುತ್ತಿದೆ ಎಂದು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದರು. ನಾವು ಬಿಜೆಪಿಯಿಂದ 6-7 ಸೀಟು ಕೇಳಿಲ್ಲ. ನಾವು ಕೇಳಿರೋದು 3-4 ಸೀಟು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. 3-4 ಸೀಟು ಕೊಡ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

 

Related Articles

Back to top button
error: Content is protected !!