ಸಾಂಸ್ಕೃತಿಕ
ಕೊರ್ಗಿ ರೋಟರಿ ಕುಂದಾಪುರ ಮಿಡ್ ಟೌನ್ ವನಮಹೋತ್ಸವ

Views: 1
ಕುಂದಾಪುರ: ಆರೋಗ್ಯ ಕೇಂದ್ರ ಕೊರ್ಗಿ ಆವರಣದಲ್ಲಿ ರೋಟರಿ ಕುಂದಾಪುರ ಮಿಡ್ ಟೌನ್ ಅವರ ವತಿಯಿಂದ ವಿವಿಧ ರೀತಿಯ ಹಣ್ಣು ಹಂಪಲು ಗಿಡಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಲಾಯಿತು,
ರೋಟರಿ ಮಿಡ್ ಟೌನ್ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ,ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೌರೀಶ್ ಹೆಗ್ಡೆ, ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರತಾಪ್ ಕುಮಾರ್ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರೋಟರಿ ವಲಯ 1ರ ವಲಯ ಸೇನಾನಿ ಕೆ. ರಂಜಿತ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗಂಗೆ ಕುಲಾಲ್, ರೋಟರಿ ಸದಸ್ಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು. ರೋಟರಿ ಕಾರ್ಯದರ್ಶಿ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನಿಷಿಯನ್ ವಿನೋದ್ ಕುಮಾರ್ ವಂದಿಸಿದರು.






