ಕರಾವಳಿ
ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರಿಗೆ ಕೋ.ಮ.ಕಾರಂತ ಪ್ರಶಸ್ತಿಗೆ ಆಯ್ಕೆ

Views: 4
ಕುಂದಾಪುರ: ಹಿರಿಯ ಪತ್ರಕರ್ತ, ತರಬೇತುದಾರ ಕೋಣಿ ಮಹಾಬಲೇಶ್ವರ ಕಾರಂತ ಪ್ರಶಸ್ತಿಗೆ ಸಾಹಿತಿ, ನಾಟಕಗಾರ, ಯಕ್ಷಗಾನ ಪ್ರಸಂಗಕರ್ತ, ವಾಗ್ಮಿ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ.
07.01.2024 ರಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರು ದೂರ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ, ನಾಟಕ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದು ಈಗಾಗಲೇ ಅವರು ಹಲವಾರು ಕೃತಿಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ.
ಇವರು ಸುವರ್ಣ ರಂಗ ಪ್ರಶಸ್ತಿ, ವಾಜ್ಮಯಿ ಪ್ರಶಸ್ತಿ ಇನ್ನಿತರ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.






