ಇತರೆ

ಕೊಲೆ ಆರೋಪ: ನಟ ದರ್ಶನ್ ಬಂಧನ

Views: 193

ಬೆಂಗಳೂರು : ಚಿತ್ರದುರ್ಗ ಮೂಲದ ಯುವಕನನ್ನು ಕೊಲೆ ಮಾಡಲಾಗಿದ್ದು, ದರ್ಶನ್ ಮತ್ತು ಅವರ 10 ಜನ ಸಹಚರರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಟಿ ಪವಿತ್ರಾ ಗೌಡ ಅವರನ್ನು ದರ್ಶನ್ ಮದುವೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇಬ್ಬರ ಫೋಟೋಗಳು ಜಾಲತಾಣದಲ್ಲಿ ಹರಿದಾಡಿದ್ದವು.

ಪವಿತ್ರಾ ಗೌಡ ಅವರಿಗೆ ಸ್ವಾಮಿ ಕೆಟ್ಟದಾಗಿ ಮೆಸೆಜ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಕೋಪಗೊಂಡಿದ್ದ ದರ್ಶನ್ ತಮ್ಮ ಬೆಂಬಲಿಗರನ್ನು ಕಳುಹಿಸಿ ಥಳಿಸಿದ್ದರು ಎನ್ನಲಾಗಿದೆ.

ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ನಗರದ ಶೆಡ್ ಒಂದರಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 ರಂದು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಕೊಲೆಗಾರರ ತಾವು ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಮೊದಲು ಮೂರು ಜನ ಪೊಲೀಸರಿಗೆ ಸರೆಂಡರ್ ಆಗಿದ್ದರು. ನಂತರ ಅವರನ್ನು ವಿಚಾರಣೆ ಮಾಡಿದ ಬಳಿಕ ಇದರಲ್ಲಿ ನಟ ದರ್ಶನ್ ಪಾತ್ರ ಇದೆ ಎಂಬುದು ಗೊತ್ತಾಗಿದೆ.

Related Articles

Back to top button
error: Content is protected !!