ಇತರೆ

ಕೊಲ್ಲೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರಿನ ಮಹಿಳೆಯ ಶವ ಮಾವಿನಕಾರು ನದಿಯಲ್ಲಿ ಪತ್ತೆ

Views: 405

ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46)  ಕೊಲ್ಲೂರಿಗೆ ಬಳಿ ಕಾರು ನಿಲ್ಲಿಸಿ  ಸೌಪರ್ಣಿಕಾ ನದಿಯತ್ತಾ ತೆರಳಿದ್ದರು.

ಮುಳುಗುತಜ್ಞ ಈಶ್ವರ ಮಲ್ಪೆಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ನಾಪತ್ತೆಯಾದ ಮಹಿಳೆಯ ಶೋಧ ಕಾರ್ಯ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ.ಆಕೆಯ ನಿಗೂಢ ಕಣ್ಮರೆ ನಾನಾ ಊಹಾಪೋಹಗಳಿಗೆ ಕಾರಣವಾಗಿತ್ತು.

ನಾಪತ್ತೆಯಾದ ಮಹಿಳೆಗಾಗಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಹುಡುಕಾಟ ನಡೆಸಿತ್ತು. ನೀರಿನ ರಭಸ ತೀವ್ರವಾಗಿರುವುದರಿಂದ ಹುಡುಕಾಟಕ್ಕೆ ಅಡ್ಡಿಯಾಗಿತ್ತು.

ಇಂದು ಮತ್ತೆ ಹುಡುಕಾಟ ನಡೆಸಿದಾಗ ಮಾವಿನಕಾರು ಬಳಿ ಮೃತದೇಹ ಪತ್ತೆಯಾಗಿದೆ. ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳೊಂದಿಗೆ ಈಶ್ವರ ಮಲ್ಪೆ ಹಾಗೂ ಸ್ಥಳೀಯ ಪ್ರದೀಪ್‌ ಭಟ್‌ ಮೊದಲಾದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Related Articles

Back to top button