ಇತರೆ

ಕೊಲ್ಲೂರಿನ ಸೌಪರ್ಣಿಕಾ ನದಿ ಬಳಿ ಬೆಂಗಳೂರಿನ ಮಹಿಳೆ ನಿಗೂಢ ನಾಪತ್ತೆ!

Views: 183

ಕನ್ನಡ ಕರಾವಳಿ ಸುದ್ದಿ: ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ.

ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ನಾಪತ್ತೆಯಾದ ಮಹಿಳೆಯ ಶೋಧ ಕಾರ್ಯ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಗಲಿಲ್ಲ

ನಾಪತ್ತೆಯಾದ ಮಹಿಳೆ ಬೆಂಗಳೂರು ತ್ಯಾಗರಾಜ ನಗರ ನಿವಾಸಿ  ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ತಿಳಿದುಬಂದಿದೆ. ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ಆಕೆಯ ವಿಳಾಸ ಪತ್ತೆಯಾಗಿದೆ.

ಅವರು ಆ. 28ರಂದು ಕೊಲ್ಲೂರಿಗೆ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿಧ  ಕಡೆಗಳಿಗೆ ಸಾಗಿ ಸೌಪರ್ಣಿಕಾ ನದಿಯತ್ತ ಆಗಮಿಸಿದ್ದು, ಇದಲ್ಲದೆ ಸೌಪರ್ಣಿಕಾ ನದಿ ಬಳಿ ಅಳವಡಿಸಲಾದ ಸಿ.ಸಿ.ಕೆಮರಾದಲ್ಲಿ ಆಕೆ  ಈಜಿಕೊಂಡು ಹೋಗುತ್ತಿರುವುದು ಸೆರೆಯಾಗಿದೆ.

ನಾಪತ್ತೆಯಾದ ಮಹಿಳೆಯ ಪೋಷಕರು ಹಾಗೂ ಕುಟುಂಬಸದಸ್ಯರು ಸುದ್ದಿ ತಿಳಿದ ಕೂಡಲೇ ಕೊಲ್ಲೂರಿಗೆ ಆಗಮಿಸಿದ್ದಾರೆ. ಆಕೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ವಿವಾಹಿತರಾಗಿದ್ದರು ಎನ್ನಲಾಗಿದೆ.

 

Related Articles

Back to top button