ಕೊಲ್ಲೂರು ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ
Views: 5
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು
ಕೊಲ್ಲೂರು ಆರಕ್ಷಕ ಠಾಣೆಯ ಠಾಣಾಧಿಕಾರಿ ವಿನಯ್ ಕೆ ಅವರು ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯು ಯಾವುದಾದರೂ ಒಂದು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ದೈಹಿಕ ಸಮತೆಯನ್ನು ಹೆಚ್ಚಿಸಿಕೊಳ್ಳಬೇಕು ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ ಆ ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಕ್ರೀಡೆ ತುಂಬಾ ಸಹಕಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಬು ಶೆಟ್ಟಿ ತಗ್ಗರ್ಸೆಯವರು ಸಂಘಟನೆ ಯಶಸ್ವಿ ಯಾಗಲಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಜಿ ಬಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಪೂಜಾರಿ, ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕೋಶಾಧಿಕಾರಿ ಸೌಜನ್ಯ ಹೆಗ್ಡೆ , ಉಡುಪಿ ಜಿಲ್ಲಾ ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಸಚಿನ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಪ್ರಸ್ತಾಪಿಸಿ, ಸ್ವಾಗತಿಸಿದರು. ಸಮಾಜ ಶಾಸ್ತ್ರ ಉಪನ್ಯಾಸಕ ನಾಗರಾಜ ಅಡಿಗ ವಂದಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸುಚಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಫಲಿತಾಂಶ: ಬಾಲಕರ ವಿಭಾಗದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ, ಜನತಾ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಹಾಗೂ ಕಾರ್ಕಳ ಜ್ಞಾನಸುಧ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.






