ಧಾರ್ಮಿಕ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ತೆಗ್ಗರ್ಸೆ ಆಯ್ಕೆ

Views: 182

ಕುಂದಾಪುರ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶುಕ್ರವಾರ ನಡೆದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ನಡೆದಿದ್ದು, ಬೈಂದೂರಿನ ತೆಗ್ಗರ್ಸೆ ಬಾಬು ಶೆಟ್ಟಿ ಅವರು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಬಾಬು ಶೆಟ್ಟಿ ಅವರು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದು, ಅವರನ್ನು ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಮಾಡುವುದಾಗಿ ಮಾತು ಕೊಟ್ಟಿದ್ದಾರೆ ಎನ್ನಲಾಗಿದೆ.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕ ನಾಯ್ಕ್, ಶ್ರೀಮತಿ ಧನಾಕ್ಷಿ, ರಾಜೇಶ್ ಕಾರಂತ್, ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ, ಅಭಿಲಾಷ್, ಆಡಳಿತಾಧಿಕಾರಿ ಮಹೇಶ್ಚಂದ್ರ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Back to top button
error: Content is protected !!