ಶಿಕ್ಷಣ
ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗುಡ್ಡಗಾಡು ಓಟ ಸ್ಫರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Views: 162
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ) ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಫರ್ಧೆಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಾಗಮಣಿ ವೈ ಎಂ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಶ್ವಿನಿ ಪ್ರಶಸ್ತಿಯನ್ನು ಪಡೆದು ತುಮಕೂರಿನಲ್ಲಿ ನೆಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿಜೇತ ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಹಾಗೂ ಶುಭ ಕೋರಿರುತ್ತಾರೆ.